ಪಶ್ಚಿಮ ಬಂಗಾಳದಲ್ಲಿ ದೀದಿ ಆಡಳಿತ ಅಧಿಕೃತವಾಗಿ ಅಂತ್ಯ

ಅಧಿಕಾರ ಬಿಡಲು ನಿರಾಕರಿಸಿದ್ದ ಸರ್ಕಾರವನ್ನು ವಜಾಗೊಳಿಸಿದ ರಾಜ್ಯಪಾಲರು

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್.ಎನ್. ರವಿ ಗುರುವಾರ ವಿಸರ್ಜಿಸಿದ್ದು, ಇದರೊಂದಿಗೆ ಪಶ್ಚಿಮ ಬಂಗಾಳದಲ್ಲಿ ಮಮತ ಬ್ಯಾಜರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ಆಡಳಿತ ಅಧಿಕೃತವಾಗಿ ಅಂತ್ಯಗೊಂಡಿದೆ. ಚುನಾವಣೆಯಲ್ಲಿ ಸೋತ ಬಳಿಕ ರಾಜೀನಾಮೆ ನೀಡದೆ ಭಾರಿ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್‌.ಎನ್‌ ರವಿ ವಜಾಗೊಳಿಸಿದ್ದಾರೆ.

2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲನ್ನನುಭವಿಸಿದರೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಮೊಂಡಾಟ ಮುಂದುವರಿಸಿದ್ದರು. ಟಿಎಂಸಿಗೆ ಸೋಲಾಗಿಲ್ಲ, ಚುನಾವಣಾ ಆಯೋಗದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಜಯಗಳಿಸಿದೆ. ಬೇಕಿದ್ದರೆ ರಾಜ್ಯಪಾಲರು ನನ್ನನ್ನು ವಜಾ ಮಾಡಲಿ ಎಂದು ಸವಾಲು ಎಸೆದಿದ್ದರು.





















































 
 

ಸಂವಿಧಾನದ 172ನೇ ವಿಧಿಯ ಪ್ರಕಾರ ವಿಧಾನಸಭೆಯು ತನ್ನ ಮೊದಲ ಸಭೆಯಿಂದ ಐದು ವರ್ಷಗಳ ಅವಧಿಯನ್ನು ಪೂರೈಸಿದ ನಂತರ ಸ್ವಯಂಚಾಲಿತವಾಗಿ ವಿಸರ್ಜನೆಯಾಗುತ್ತದೆ. ಅದರಂತೆ 2021ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಸರ್ಕಾರದ ಅವಧಿ ಮೇ 7ಕ್ಕೆ ಪೂರ್ಣಗೊಂಡಿದ್ದು 17ನೇ ವಿಧಾನಸಭೆ ಅವಧಿ ಅಧಿಕೃತವಾಗಿ ಅಂತ್ಯಗೊಂಡಿದೆ.

ಅಂತ್ಯಗೊಂಡ ಬೆನ್ನಲ್ಲೇ ಆರ್‌ಎನ್‌ ರವಿ ಅವರು ಸಂವಿಧಾನದ 164(1)ನೇ ವಿಧಿಯಡಿ ಮೇ 7ರಿಂದ ಜಾರಿಗೆ ಬರುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸಚಿವ ಸಂಪುಟವನ್ನು ವಜಾಗೊಳಿಸಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಈ ಅವಧಿ ಮುಕ್ತಾಯದೊಂದಿಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲಾ 294 ಶಾಸಕರ ಸದಸ್ಯತ್ವವು ಅಧಿಕೃತವಾಗಿ ರದ್ದಾಗಿದೆ. ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದರೂ ಸಂವಿಧಾನದ ನಿಯಮದಂತೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿರಲಿಲ್ಲ.

ಈ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಟಿಎಂಸಿ 80 ಸ್ಥಾನಗಳಿಗೆ ಕುಸಿದಿದೆ. ಸ್ವತಃ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರದಲ್ಲಿ ಸುಮಾರು 15 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ರಾಜ್ಯಪಾಲರು ಚುನಾವಣೆಯಲ್ಲಿ ಬಹುಮತ ಸಾಧಿಸಿರುವ ಬಿಜೆಪಿ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡಲಿದ್ದಾರೆ. ಮೇ 9ರಂದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದೆ.

error: Content is protected !!
Scroll to Top