ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ

ಮುಗಿಯದ ಅಂಚೆ ಮತಗಳ ಮರು ಎಣಿಕೆ ತಕರಾರು

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್‌ನ ಟಿ.ಡಿ ರಾಜೇಗೌಡ ಸುಪ್ರೀಂ ಕೋರ್ಟ್​ ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಕಾನೂನು ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈಗ ರಾಜೇಗೌಡ ಸಹ ಮರು ಎಣಿಕೆಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ತ್ವರಿತ ವಿಚಾರಣೆಗೆ ಕೋರಿಕೆಯನ್ನು ಪರಿಗಣಿಸುವುದಾಗಿ ಹೇಳಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಬಿಜೆಪಿಯ ಡಿ.ಎನ್‌ ಜೀವರಾಜ್ ಹೈಕೋರ್ಟ್​​ ಮೆಟ್ಟಿಲೇರಿದ್ದು, ಸುಮಾರು ಎರಡೂವರೆ ವರ್ಷಗಳ ಸತತ ವಿಚಾರಣೆ ಬಳಿಕ ಅಂತಿಮವಾಗಿ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಬಳಿಕ ಕೋರ್ಟ್ ಆದೇಶದಂತೆ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತಗಳ ಮರು ಎಣಿಕೆ ಮಾಡಲಾಗಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದು ಮೇ 7ರಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್​​​ನ ರಾಜೇಗೌಡ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದಾರೆ.





















































 
 

ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಮರುಎಣಿಕೆ ಪ್ರಕ್ರಿಯೆಯನ್ನು ಆದೇಶಿಸುವಲ್ಲಿ ಹೈಕೋರ್ಟ್ ತಪ್ಪು ಮಾಡಿದೆ ಎಂದು ರಾಜೇಗೌಡ ಪರ ವಕೀಲ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದಾರೆ. ಈ ವಾದ ಆಲಿಸಿದ ಸುಪ್ರೀಂಕೋರ್ಟ್, ನಾವು ಇಂತಹ ವಿಷಯಗಳಲ್ಲಿ ತಡೆಯಾಜ್ಞೆ ನೀಡುತ್ತೇವೆ. ಆದರೆ ನಿಮ್ಮ ವಿಷಯವನ್ನು ನಾವು ಪರಿಶೀಲಿಸುತ್ತೇವೆ ಎಂದು ತಿಳಿಸಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್​​​ನ ಟಿ.ಡಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರನ್ನು 201 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದರು. ಆದರೆ ಕಾನೂನು ಹೋರಾಟ ನಡೆಸಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಗೆಲುವು ಸಾಧಿಸಿದ್ದಾರೆ.

error: Content is protected !!
Scroll to Top