ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : ಓರ್ವ ಸಾವು, ನಾಲ್ವರಿಗೆ ಗಂಭೀರ ಸುಟ್ಟ ಗಾಯ

ತಡರಾತ್ರಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹತ್ತಿಕೊಂಡ ಬೆಂಕಿ

ಬೆಂಗಳೂರು: ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಹೋಟೆಲ್‌ಗೆ ಬೆಂಕಿ ತಗುಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಮೃತ ಸಿಬ್ಬಂದಿಯನ್ನು ರಾಜ್‌ಕುಮಾರ್ ಎಂದು ಗುರುತಿಸಲಾಗಿದ್ದು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.





















































 
 

ಶುಕ್ರವಾರ ತಡರಾತ್ರಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್‌ನಲ್ಲಿ ಕೆಲಸ ಮಾಡುವ ಎಂಟು ಜನ ಸಿಬ್ಬಂದಿ ಅದೇ ಹೋಟೆಲ್‌ನ ಮೇಲಿನ ಫ್ಲೋರ್‌ನಲ್ಲಿ ವಾಸವಿದ್ದರು. ಬೆಂಕಿಯ ಕೆನ್ನಾಲಿಗೆ ಮೇಲಿನ ಮಹಡಿಗೂ ಹಬ್ಬಿದ್ದು, ತಕ್ಷಣ ಅಲ್ಲಿದ್ದ ಸಿಬ್ಬಂದಿ ಕೆಳಗೆ ಇಳಿಯುವುದಕ್ಕೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿ ಸಂಪೂರ್ಣ ಅವರಿಸಿಕೊಂಡು ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ.

ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top