ಶೃಂಗೇರಿ : ಐದೇ ದಿನದಲ್ಲಿ ಮುಗಿದು ಹೋದ ಜೀವರಾಜ್‌ ಶಾಸಕತ್ವ

ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ : ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರಿಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮರು ಮತ ಎಣಿಕೆಯಲ್ಲಿ ಗೆದ್ದು ಮೇ 6ರಂದು ಶಾಸಕರಾಗಿ ಪ್ರಮಾಣ ವಚನ ಸ್ವೀರಿಕರಿಸಿದ್ದ ಬಿಜೆಪಿಯ ಜೀವರಾಜ್​​ ಶಾಸಕತ್ವ ಐದೇಧ ದಿನದಲ್ಲಿ ಮುಗಿದುಹೋಗಿದೆ.

ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಕಾಂಗ್ರೆಸ್​​ನ ರಾಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಿಚಾರಣೆ ನಡೆಸಿದ್ದು, ​​ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಡಿ.ಎನ್‌. ಜೀವರಾಜ್‌ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಯಥಾಸ್ಥಿತಿ ಮುಂದುವರಿಸಲು ಸುಪ್ರೀ ಕೋರ್ಟ್‌ ಸೂಚನೆ ನೀಡಿದೆ. ಇದರಿಂದ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.





















































 
 

ಅಂಚೆ ಮತ ಎಣಿಕೆಯಲ್ಲಿ 2 ಮತ ನನ್ನ ಪರವಾಗಿ ಬಂದಿತ್ತು. ನನ್ನ ಮತಗಳು ಹೆಚ್ಚಾಗುವ ಬದಲು ಕಡಿಮೆ‌ ತೋರಿಸಲಾಗಿತ್ತು. ಈ‌ ಹಂತದಲ್ಲಿ ‌ಅಕ್ರಮವಾಗಿದೆ ಎಂದು ಅನುಮಾನ ಇತ್ತು. ಹೀಗಾಗಿ ನಾನು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ನ್ಯಾಯ ಸಿಕ್ಕಂತಾಗಿದೆ ಎಂದು ರಾಜೇಗೌಡ ಹೇಳಿದ್ದಾರೆ.

2023ರ ಚುನಾವಣೆಯಲ್ಲಿ 201 ಮತಗಳ ಅಂತರದಿಂದ ಗೆದ್ದಿದ್ದ ರಾಜೇಗೌಡರು, 2026ರ ಮರು ಎಣಿಕೆಯಲ್ಲಿ 52 ಮತಗಳಿಂದ ಸೋಲನ್ನಪ್ಪಿದ್ದರು. ಕಳೆದ ಬಾರಿ ಮಾನ್ಯವಾಗಿದ್ದ 255 ಮತಗಳು ಈ ಬಾರಿ ಅಮಾನ್ಯವಾಗಿದ್ದು ಹೇಗೆ ಎಂದು ಹೈಕೋರ್ಟ್​​​ನ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಮರು ಎಣಿಕೆ ಬಳಿಕ ಡಿ.ಎನ್ ಜೀವರಾಜ್ ಅವರಿಗೆ 690 ಮತ ಬಂದಿದ್ದು, ಟಿ.ಡಿ ರಾಜೇಗೌಡ ಅವರಿಗೆ 314 ಮತಗಳು ಸಿಕ್ಕಿವೆ. 255 ಮತಗಳು ಡಬಲ್ ಟಿಕ್‌ ಆಗಿರುವ ಹಿನ್ನೆಲೆ ಅಸಿಂಧು ಆಗಿವೆ. ಹೀಗಾಗಿ 2026 ಮೇ‌ 2ರಂದು ನಡೆದ ಮರು ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ 52 ಮತಗಳಿಂದ ಗೆಲುವು ಸಾಧಿಸಿದ್ದರು.

2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಿದೆಯೆಂದು ಆರೋಪಿಸಿ ಜೀವರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮರು ಎಣಿಕೆಗೆ ಆದೇಶ ನೀಡಿತ್ತು. ಅದರಂತೆ ಮರು ಎಣಿಕೆ ಸಂದರ್ಭದಲ್ಲಿ ಜೀವರಾಜ್‌ ಅವರು ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗ ಜೀವರಾಜ್‌ ಅವರನ್ನು ಶಾಸಕ ಎಂದು ಘೋಷಿಸಿ ದೃಢೀಕರಣ ಪತ್ರ ನೀಡಿತ್ತು. ಜೀವರಾಜ್ ಎರಡೂವರೆ ವರ್ಷದ ಬಳಿಕ ಮೇ 6ರಂದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

error: Content is protected !!
Scroll to Top