ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ

ಅಕ್ರಮವಾಗಿ ನಿರ್ಮಿಸಿದ್ದ ಕ್ಯಾಂಟಿನ್‌ನಲ್ಲಿ ಅಕ್ರಮ ವ್ಯವಹಾರ

ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಇದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವವರನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನನ್ನು ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್‌ಗೆ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ ಸುಂದರ್ ಶೆಟ್ಟಿ ಕ್ಯಾಂಟಿನ್ ಒಳಗಡೆ ಬೆಡ್ ರೂಂ, ಶೌಚಾಲಯ ವ್ಯವಸ್ಥೆ ಮಾಡಿಕೊಂಡು ಮಹಿಳೆಯನ್ನು ಕರೆದುಕೊಂಡು ಬಂದು ಗಿರಾಕಿಗಳನ್ನು ಕರೆಸಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ‌.





















































 
 

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ 10ರಂದು ಸಂಜೆ 5 ಗಂಟೆಗೆ ಪವನ್ ಕ್ಯಾಂಟಿನ್ ಮೇಲೆ ಪೊಲೀಸರು ದಾಳಿ ಮಾಡಿದಾಗ ವೇಶ್ಯಾವಾಟಿಕೆ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಂಟಿನ್ ಒಳಗಡೆ ಮಾಲೀಕ ಸುಂದರ್ ಶೆಟ್ಟಿ (55), ಗಿರಾಕಿಗಳಾದ ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಹುಸ್ಮಾನ್ (38), ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತದ ಗ್ರಾಮದ ಕಲ್ಲೇರಿ ನಿವಾಸಿ ಹೈದರ್(45) ಎಂಬವರನ್ನು ಬಂಧಿಸಿದ್ದಾರೆ. 29 ವರ್ಷದ ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಮೊಬೈಲ್ ಫೋನ್, 5 ಸಾವಿರ ಹಣ, ಕಾಂಡೋಮ್‌ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಸಬ್ ಇನ್‌ಸ್ಪೆಕ್ಟರ್ ಸಿಕಂದರ್ ಪಾಷಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

error: Content is protected !!
Scroll to Top