ಕನ್ನಡದ ಖ್ಯಾತ ನಟ ದಿಲೀಪ್‌ ರಾಜ್‌ ನಿಧನ

ಹೀರೊ, ವಿಲನ್‌ ಪಾತ್ರಗಳಲ್ಲಿ ಮಿಂಚಿದ್ದ ಪ್ರತಿಭಾವಂತ ಕಲಾವಿದ

ಬೆಂಗಳೂರು: ಕನ್ನಡದ ಕಿರುತೆರೆ ಮತ್ತು ಸಿನಿಮಾ ನಟ ದಿಲೀಪ್‌ ರಾಜ್‌ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಸಿನಿಮಾ ಮತ್ತು ಟಿವಿ ಎರಡರಲ್ಲೂ ನಟ, ನಿರ್ಮಾಪಕ ದಿಲೀಪ್ ರಾಜ್ ಗುರುತಿಸಿಕೊಂಡಿದ್ದರು. 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.





















































 
 

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್‌ ರಾಜ್‌ ಕೊನೆಯದಾಗಿ ʼಲವ್‌ ಮಾಕ್ಟೇಲ್‌ 3ʼ ಸಿನಿಮಾದಲ್ಲಿ ನಟಿಸಿದ್ದರು. ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರವಾಹಿಗಳಲ್ಲೂ ನಟಿಸಿದ್ದರು.

ಇಂದು ಬೆಳಗಿನ ಜಾವ ದಿಲೀಪ್ ರಾಜ್‌ಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ದಿಲೀಪ್‌ ನಿಧನಕ್ಕೆ ಕನ್ನಡ ಚಿತ್ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

error: Content is protected !!
Scroll to Top