ಇಂದಿರಾ ಗಾಂಧಿ ನಂತರದ ಮಾಸ್‌ ಲೀಡರ್‌ ಮೋದಿ : ರಾಜಣ್ಣ ಹೊಗಳಿಕೆ

ಮೋದಿ ಜನರನ್ನು ಆಕರ್ಷಿಸುವ ಲೀಡರ್‌ ಎಂದ ಮಾಜಿ ಸಚಿವ

ಬೆಂಗಳೂರು: ಇಂದಿರಾ ಗಾಂಧಿ ನಂತರ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿ ಕಾಂಗ್ರೆಸ್‌ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದ್ದಾರೆ.

ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.





















































 
 

ರಾಜಕಾರಣದಲ್ಲಿ ಜನಪ್ರಿಯತೆ ಯಾರಿಗೂ ಶಾಶ್ವತವಲ್ಲ. ಅದನ್ನು ಮೊದಲು ಅವರು ಅರಿಯಬೇಕು. ಈ ಹಿಂದೆ ಇಂದಿರಾ ಗಾಂಧಿಯವರ ಹೆಸರು ಹೇಳಿಕೊಂಡೇ 200 ಜನ ಎಂಪಿಗಳು ಗೆಲ್ಲುತ್ತಿದ್ದರು. ಆದರೆ ಅವರೇ ಪರಿಸ್ಥಿತಿಯ ಒತ್ತಡಗಳಿಗೆ ಸಿಲುಕಿ ಸ್ವಯಂ ಸೋಲು ಅನುಭವಿಸಬೇಕಾಯಿತು ಎಂದರು.

‘ನೀವು ಮೋದಿಯನ್ನು ಹೊಗಳಬಿಟ್ಟವ್ನೇ’ ಅಂತ ಬರೆದರೆ ನಮ್ಮವರೆಲ್ಲ ನನ್ನ ಮೇಲೆ ಕಣ್ಣು ಕೆಂಪಗೆ ಮಾಡ್ಕೋತಾರೆ. ನಾನು ವಾಸ್ತವಾಂಶವನ್ನು ಹೇಳುವವನು. ಮೋದಿ ಈಗ ಆಕಾಶದಲ್ಲಿ ಇದ್ದಾರೆ, ಭೂಮಿಗೆ ಬಂದಾಗ ಕಷ್ಟ, ಸುಖ ಏನು ಅಂತ ಗೊತ್ತಾಗುತ್ತೆ ಎಂದರು.

error: Content is protected !!
Scroll to Top