ಸಿಎನ್‌ಜಿ ದರವೂ ಕೆ.ಜಿ.ಗೆ 2 ರೂ. ಏರಿಕೆ

ಪೆಟ್ರೋಲ್‌, ಡೀಸೆಲ್‌ ಬೆನ್ನಲ್ಲೇ ಇನ್ನೊಂದು ಬರೆ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆ.ಜಿ. ಗೆ 2 ರೂಪಾಯಿ ಏರಿಕೆ ಮಾಡಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನಷ್ಟು ಏರಿಕೆಯಾದ ಬೆನ್ನಲ್ಲೇ ಸಿಎನ್​ಜಿ ದರ ಕೂಡ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ ಈಗಾಗಲೇ ದರ ಹೆಚ್ಚಳ ಮಾಡಿದ್ದು, ಅಲ್ಲಿನ ಬೆಲೆ ಈಗ ಪ್ರತಿ ಕೆಜಿಗೆ 84 ರೂ. ತಲುಪಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯ ಕುಸಿತವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದು ಕಂಪನಿಗಳು ತಿಳಿಸಿವೆ.





















































 
 

ಸಿಎನ್‌ಜಿ ದರ ಏರಿಕೆಯು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದೆ. ಈ ಹಿಂದೆಯೂ ಇಂಧನ ಬೆಲೆ ಏರಿಕೆಯಾದಾಗ ಆಟೋ ಚಾಲಕರು ಬೀದಿಗಿಳಿದು ಪ್ರತಿಭಟಿಸಿದ್ದರು. ದಿನವಿಡೀ ದುಡಿದರೂ ಅನಿಲದ ದರ ಹೆಚ್ಚಳದಿಂದಾಗಿ ಕೈಗೆ ಸಿಗುವ ಲಾಭ ಶೂನ್ಯವಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಬಾಡಿಗೆ ದರ ಹೆಚ್ಚಿಸಿದರೆ ಜನ ಆಟೋ ಹತ್ತಲ್ಲ, ಹೆಚ್ಚಿಸದಿದ್ದರೆ ನಮಗೆ ಹೊಟ್ಟೆ ತುಂಬಲ್ಲ ಎಂಬುದು ಅವರ ಸಮಸ್ಯೆ. ಬೆಂಗಳೂರಿನಂತಹ ನಗರಗಳಲ್ಲಿ ಈಗಾಗಲೇ ಸಿಎನ್‌ಜಿ ಕೊರತೆಯಿಂದಾಗಿ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು, ಈಗ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.

error: Content is protected !!
Scroll to Top