ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ.
ಏಪ್ರಿಲ್ 6ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್ 28 ರಂದು ಬಿ.ಸಿ ರೋಡ್ ಬಳಿ KA05KG6785 ನೊಂದಣಿಯ ದ್ವಿಚಕ್ರ ವಾಹನವನ್ನು ಬಾಲಕರು ಚಾಲನೆ ಮಾಡಿರುವುದು ಬಂಟ್ವಾಳ ಸಂಚಾರ ಠಾಣಾ ಪೊಲೀಸರು ವಾಹನ ತಪಾಸಣೆಯ ವೇಳೆ ಪತ್ತೆಹಚ್ಚಿದ್ದರು.
ಅಪ್ರಾಪ್ತ ವಯಸ್ಸಿನವರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ವಾಹನಗಳ ಮಾಲಿಕರ ವಿರುದ್ಧ ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಕೇಸ್ ದಾಖಲಿಸಿದ್ದರು. ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಎರಡೂ ವಾಹನದ ಮಾಲೀಕರಿಗೆ ತಲಾ ರೂ.25,000 ದಂಡ ವಿಧಿಸಿ ಅದೇಶಿಸಿದೆ.
























