ದೆಹಲಿಯಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದ ದುಷ್ಕರ್ಮಿಗಳು
ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಪೊಲೀಸರು ಒಟ್ಟು ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ.
ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿಗಳು ಮಾದಕ ವಸ್ತುವನ್ನು ಟೇಬಲ್ ಮತ್ತು ಚೇರ್ಗಳಲ್ಲಿ ಅಡಗಿಸಿಟ್ಟು ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ತಂದಿದ್ದು, ಅದನ್ನ ಕಾಲೇಜುಗಳು, ಐಷಾರಾಮಿ ಏರಿಯಾಗಳಲ್ಲಿ ಕಾರಿನಲ್ಲಿ ಕುಳಿತು ಮಾರಾಟ ಮಾಡುತ್ತಿದ್ದರು. ಪೊಲೀಸರು ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿ, ಹದಿನೇಳು ಕೆಜಿ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
























