ಹೋರಿ ಹಾಯ್ದು ಗಾಯಗೊಂಡಿದ್ದ ಯುವಕ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ನಿವಾಸಿ ಯುವಕಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ಉಪ್ಪಿನಂಗಡಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವಿದೆ ಎಂದು ಆರೋಪಿಸಿ ಮೃತನ ಮನೆಯವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಗೇರುಕಟ್ಟೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ಶರೀಫ್ (35) ಮೃತ ವ್ಯಕ್ತಿ. ಮೇ 14ರಂದು ಮನೆಯಲ್ಲಿ ಹೋರಿ ಹಾಯ್ದು ಗಾಯಗೊಂಡಿದ್ದರು. ಕೂಡಲೇ ಇವರನ್ನು ಉಪ್ಪಿನಂಗಡಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಮಹಮ್ಮದ್ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಮೇ 20ರಂದು ಮೃತಪಟ್ಟಿದ್ದಾರೆ. ಸಾವಿಗೆ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯ ಕಾರಣ ಎಂದು ಮೃತನ ಸಹೋದರ ನಾಸಿರುದ್ದೀನ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 194(3)(4)ರಂತೆ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷದ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧ ಪಟ್ಟ ಇಲಾಖೆಯೊಂದಿಗೆ ಕೇಳಿಕೊಳ್ಳಲಾಗಿದ್ದು ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.





















































 
 

ಮೃತರ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ನಡೆಸಲಾಗಿದ್ದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮರಣಕ್ಕೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಲಿದೆ.

error: Content is protected !!
Scroll to Top