ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಎರಡನೇ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ.
ಎ. 30 ರಿಂದ ಮೇ 13 ರ ವರೆಗೆ 253 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ 2 ನೇ ಪರೀಕ್ಷೆ ನಡೆದಿತ್ತು. ಪರೀಕ್ಷೆಗೆ 80,535 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಫಲಿತಾಂಶ ತಿಳಿಯಲು ನೋಂದಣಿ ಸಂಖ್ಯೆ ಮತ್ತು ಸಂಯೋಜನೆಯನ್ನು ವೆಬ್ಸೈಟ್ https://dpue-https://karresults.nic.in ಅಥವಾ https://dpue-exam.karnataka.gov.in/kseabdpue2025e1e2e3/WebForm1.aspx ನಲ್ಲಿ ಅಥವಾ ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಶನ್ ಮೂಲಕ ವೀಕ್ಷಿಸಬಹುದು.
























