ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಬರೆ

ಪೆಟ್ರೋಲು 87 ಪೈಸೆ, ಡೀಸೆಲ್‌ 91 ಪೈಸೆ ಹೆಚ್ಚಳ

ನವದೆಹಲಿ : ಹತ್ತೇ ದಿನದ ಅವಧಿಯಲ್ಲಿ ಮತ್ತೊಮ್ಮೆ ಪೆಟ್ರೋಲು ಮತ್ತು ಡೀಸೆಲ್‌ ದರ ಏರಿಕೆಯಾಗಿದೆ. ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ.

ಇತ್ತೀಚಿನ ದಿನಗಳಲ್ಲಿ ತೈಲ ಕಂಪನಿಗಳು ಗ್ರಾಹಕರ ಮೇಲೆ ಸತತವಾಗಿ ಇಂಧನ ಹೊರೆಯನ್ನು ಹಾಕುತ್ತಿವೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್‌ಗೆ ಒಮ್ಮೆಗೆ ಸುಮಾರು 3 ರೂ.ಗಳಷ್ಟು ದರಗಳನ್ನು ಹೆಚ್ಚಿಸುವ ಮೂಲಕ ದೀರ್ಘಾವಧಿಯ ಬೆಲೆ ಸ್ಥಿರತೆಗೆ ಬ್ರೇಕ್ ಹಾಕಿದ್ದವು. ಇತ್ತೀಚಿನ ಈ ಪರಿಷ್ಕರಣೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.77 ರೂ.ಗಳಿಂದ 98.64 ರೂ.ಗೆ ತಲುಪಿದೆ.





















































 
 

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಏರಿಕೆಯಾಗಿ, 98.64 ರೂ.ಗಳಿಂದ 99.51 ರೂ.ಗಳಿಗೆ ತಲುಪಿದೆ. ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿ 91.58 ರೂ.ಗಳಿಂದ 92.49 ರೂ.ಗಳಿಗೆ ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 110.57 ರೂ. ಡೀಸೆಲ್ 96.04 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 107.56 ರೂ. ಡೀಸೆಲ್, 94.05 ರೂ.ಚೆನ್ನೈನಲ್ಲಿ ಪೆಟ್ರೋಲ್ 104.54 ರೂ. ಡೀಸೆಲ್ 96.16 ರೂ. ಆಗಿದೆ.

ಮಧ್ಯಪ್ರಾಚ್ಯದಲ್ಲಿ ತಲೆದೂರಿರುವ ಯುದ್ಧದ ವಾತಾವರಣ ಮತ್ತು ಅಮೆರಿಕ-ಇರಾನ್ ನಡುವಿನ ಶಾಂತಿ ಮಾತುಕತೆಗಳ ಸುತ್ತಲಿನ ಅನಿಶ್ಚಿತತೆ ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ಕಾಣುತ್ತಿವೆ. ಶುಕ್ರವಾರ ಕಚ್ಚಾತೈಲದ ಬೆಲೆ ಬ್ಯಾರೆಲ್‌ಗೆ 104 ಡಾಲರ್‌ಗಿಂತ ಹೆಚ್ಚಾಗಿದ್ದರೆ, ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾತೈಲವು ಬ್ಯಾರೆಲ್‌ 97 ಡಾಲರ್ ಆಸುಪಾಸಿನಲ್ಲಿ ವಹಿವಾಟು ನಡೆಸಿದೆ. ಜಾಗತಿಕ ಪೂರೈಕೆಯ ವ್ಯತ್ಯಯಗಳ ಮಧ್ಯೆ ಒಂದು ಹಂತದಲ್ಲಿ ಕಚ್ಚಾತೈಲದ ಬೆಲೆ ಬ್ಯಾರೆಲ್‌ಗೆ ಬರೋಬ್ಬರಿ 111 ಡಾಲರ್‌ಗೆ ತಲುಪಿತ್ತು.

ತೈಲ ಕಂಪನಿಗಳಿಗೆ ಆಗುತ್ತಿದ್ದ ಭಾರಿ ನಷ್ಟ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಸತತವಾಗಿ ಏರುತ್ತಿದ್ದರೂ, ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳುಗಳಿಂದ ಇಂಧನ ಬೆಲೆಗಳನ್ನು ಬದಲಾಯಿಸದೆ ಗ್ರಾಹಕರಿಗೆ ನೆರವಾಗಿದ್ದವು.

error: Content is protected !!
Scroll to Top