ಉಪ್ಪಿನಂಗಡಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಠಾಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರಂ ಬಂಧಿತ ಆರೋಪಿ.
ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

