ಭಟ್ಕಳದಲ್ಲಿ ಮುರಿನ ಕಟ್ಟೆ ವಿವಾದ : ಮುಸ್ಲಿಮರಿಂದ ಪೊಲೀಸರ ಮೇಲೆ ಹಲ್ಲೆ ಆರೋಪ

ಹೆದ್ದಾರಿ ವಿಸ್ತರಣೆಗಾಗಿ ತೆರವುಗೊಂಡಿದ್ದ ಧಾರ್ಮಿಕ ಮಹತ್ವದ ಮುರಿನ ಕಟ್ಟೆ ನಿರ್ಮಾಣ ವಿವಾದ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮಹತ್ವ ಇರುವ ಮುರಿನ ಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರಿವಿವಾದ ಸೃಷ್ಟಿಯಾಗಿ ಕೋಮುಸೂಕ್ಷ್ಮ ಪರಿಸ್ಥಿತಿ ನೆಲೆಸಿದೆ. ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮುರಿನ ಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಜಾಗದಲ್ಲಿ ಮುಂಜಾನೆ ಮುರಿನ ಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. ಆದರೆ ಈ ನಿರ್ಮಾಣಕ್ಕೆ ಸ್ಥಳೀಯ ಮುಸ್ಲಿಂ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು ಹಾಗೂ ಮುರಿನ ಕಟ್ಟೆಯನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು.





















































 
 

ಇಲ್ಲಿ ಭಾನುವಾರ ರಾತ್ರಿ ಏಕಾಏಕಿ ಜಮಾಯಿಸಿದ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರ ಗುಂಪು, ಬೆಳಗ್ಗೆ ನಿರ್ಮಿಸಲಾಗಿದ್ದ ಮುರಿನ ಕಟ್ಟೆಯನ್ನು ಒಡೆದು ಹಾಕಿದ್ದಾರೆ. ಈ ವೇಳೆ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನು ನಿಯಂತ್ರಿಸಲು ಮುಂದಾದ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ.

ಇದೇ ವೇಳೆ ಪೊಲೀಸರು ವಿವಾದಿತ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಗೋವಿಂದ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಲಗಳ ಪ್ರಕಾರ ಭಾರಿ ಪೊಲೀಸ್ ಬಂದೋಬಸ್ತ್ ನಡುವೆಯೂ ಬಿಜೆಪಿ ಕಾರ್ಯಕರ್ತರು ‘ಮುರಿನ ಕಟ್ಟೆ’ ಸ್ಥಳದ ಬಳಿ ಜಮಾಯಿಸಿ ಒಳಗೆ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ತಡೆದರು. ಇದರಿಂದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ತಿಳಿದು ಬಂದಿದೆ.

ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎನ್. ದೀಪನ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿ ರಾಮ್ ಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಪೊಲೀಸರು ಗೋವಿಂದ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

error: Content is protected !!
Scroll to Top