ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಶಾಕ್‌

ಪೆಟ್ರೋಲು 2.61 ರೂ., ಡೀಸೆಲ್​​​ 2.71 ರೂ. ಹೆಚ್ಚಳ- 11 ದಿನಗಳಲ್ಲಿ ಒಟ್ಟು 7.5 ರೂ ಏರಿಕೆ

ನವದೆಹಲಿ : ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ನೀಡಲಾಗಿದೆ. ಕೇಂದ್ರ ಸರ್ಕಾರ 11 ದಿನಗಳಲ್ಲಿ 4ನೇ ಬಾರಿ ದರ ಏರಿಕೆ ಮಾಡಿದೆ. ಪೆಟ್ರೋಲ್​ ದರ ಲೀಟರ್​ಗೆ 2.61 ರೂ. ಮತ್ತು ಡೀಸೆಲ್​​​ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್​, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್​ ಪೆಟ್ರೋಲ್​ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್ ದರ 102.12 ರೂ. ಮತ್ತು ಲೀಟರ್ ಡೀಸೆಲ್ ದರ 95.20 ರೂ. ಆಗಿದೆ.

ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಈ ದರ ಏರಿಕೆ ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಸರ್ಕಾರಿ ಸ್ವಾಮ್ಯದ ಆಯಿಲ್​​ ಆ್ಯಂಡ್​​ ನ್ಯಾಚುರಲ್​​ ಗ್ಯಾಸ್​​ ಕಾರ್ಪೊರೇಷನ್​​ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೆಷನ್​​ ಲಿಮಿಟೆಡ್​​ ಅಧಿಕಾರಿಗಳು, ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಜಾಗತಿಕ ಕಚ್ಚಾತೈಲ ದರ ಏರಿಕೆ ಹಾಗೂ ತೈಲ ಕಂಪನಿಗಳ ನಷ್ಟವೇ ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.





















































 
 

ಹೊರ್ಮುಜ್ ಜಲಸಂಧಿಯಲ್ಲಿ ಹಲವು ತಿಂಗಳುಗಳಿಂದ ಉಂಟಾಗಿರುವ ತಡೆ ಮತ್ತು ವ್ಯತ್ಯಯಗಳಿಂದ ಜಾಗತಿಕ ಇಂಧನ ಸಾಗಣೆ ವ್ಯವಸ್ಥೆ ಮೇಲೆ ಒತ್ತಡ ಹೆಚ್ಚಿದ್ದು, ಮಧ್ಯಪ್ರಾಚ್ಯದಿಂದ ತೈಲ ಮತ್ತು ಅನಿಲವನ್ನು ಆಮದು ಮಾಡುವ ದೇಶಗಳ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಸಂಘರ್ಷದ ಅವಧಿಯಲ್ಲಿ ಕಚ್ಚಾತೈಲದ ಬೆಲೆ ಬ್ಯಾರೆಲ್‌ಗೆ 65-70 ಡಾಲರ್‌ನಿಂದ 110-115 ಡಾಲರ್‌ಗೆ ಏರಿಕೆಯಾಗಿದೆ. ಭಾರತ ತನ್ನ ಅಗತ್ಯದ ಸುಮಾರು ಶೇಕಡಾ 85 ರಷ್ಟು ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುವುದರಿಂದ ಆರ್ಥಿಕತೆಯ ಮೇಲೆ ಪರಿಣಾಮ ಹೆಚ್ಚಾಗಿದೆ ಎನ್ನಲಾಗಿದೆ.

error: Content is protected !!
Scroll to Top