ಗೃಹಲಕ್ಷ್ಮಿ, ಗೃಹಜ್ಯೋತಿ ಗ್ಯಾರಂಟಿಗಳ ಪರಿಷ್ಕರಣೆಗೆ ನಿರ್ಧಾರ

ಯೋಜನೆಯಲ್ಲಿ ಅನರ್ಹ ಫಲಾನುಭವಿಗಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೀರ್ಮಾನ

ಬೆಂಗಳೂರು: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಕೆಲವು ಗ್ಯಾರಂಟಿಗಳು ದುರುಪಯೋಗವಾಗುತ್ತಿದೆ ಎಂಬ ಕಾರಣವೊಡ್ಡಿ ಪರಿಷ್ಕರಣೆಗೆ ಮುಂದಾಗಿದೆ. 2 ಮಹತ್ವದ ಗ್ಯಾರಂಟಿಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆಗೆ ನಿರ್ಧರಿಸಿದೆ. ಶಾಸಕರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ.

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿತಿಂಗಳು 1 ಕೋಟಿ 64 ಲಕ್ಷ ಮಹಿಳೆಯರು 2,000 ರೂ. ಹಣ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲೂ 1 ಕೋಟಿ 67 ಲಕ್ಷ ಫಲಾನುಭವಿಗಳಿದ್ದಾರೆ.





















































 
 

ಗೃಹಲಕ್ಷ್ಮಿ ಯೋಜನೆಯಲ್ಲಿ ಅರ್ಹತೆ ಮೀರಿದವರು ಜೊತೆಗೆ ಸತ್ತವರ ಹೆಸರಿನಲ್ಲೂ ಹಣ ಪಡೆಯಲಾಗುತ್ತಿದೆ ಎಂಬ ಮಾಹಿತಿ ಇದೆ. ಗೃಹಜ್ಯೋತಿ ಯೋಜನೆಯಲ್ಲೂ ಬಹುತೇಕ ಅರ್ಹತೆ ಮೀರಿದವರು ಫಲಾನುಭವಿಗಳಾಗುತ್ತಿದ್ದಾರೆ ಅನ್ನೋ ಮಾಹಿತಿ ಇದೆ. ಅದೇ ಕಾರಣಕ್ಕೆ ಎರಡು ಯೋಜನೆಯ ಪರಿಷ್ಕರಣೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್‌ ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಗೃಹಲಕ್ಷ್ಮಿ ಹಣದಲ್ಲಿ 5,000 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ್ದರು. ಇದಾದ 2 ದಿನಗಳಲ್ಲೇ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

error: Content is protected !!
Scroll to Top