ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಮಾಣಿಯಲ್ಲಿ ನಡೆದಿದೆ.
ಸ್ಕೂಟರ್ ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದು ಲಾರಿಯ ಹಿಂಭಾಗಕ್ಕೆ ಗುದ್ದಿದೆ. ಅಪಘಾತದಲ್ಲಿ ಕಲಂದರ್ ಶಾ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿರುವುದಾಗಿದೆ.
ಮೂಲತಃ ಸುಳ್ಯ ನಿವಾಸಿಯಾಗಿರುವ ಅವರು ಕಲ್ಲರ್ಪೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
























