ಧಾರವಾಡ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮುಸ್ಲಿಂ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಖಾಜಾಸಾಬ್(19) ಎಂದು ಗುರುತಿಸಲಾಗಿದೆ. ಆರೋಪಿ 14 ವರ್ಷದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿದೆ. 9 ನೇ ತರಗತಿಯ ಬಾಲಕಿಯನ್ನು ಪ್ರೀತಿ – ಪ್ರೇಮ ಎಂದು ಮರುಳು ಮಾಡಿದ್ದಾನೆ. ಆಗಾಗ ಆಕೆಯ ಮನೆಗೆ ಹೋಗುತ್ತಿದ್ದ ಖಾಜಾಸಾಬ್ ಆಕೆಯ ಜೊತೆಗೆ ಅನುಚಿತವಾಗಿ ವರ್ತಿಸಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.
ಕಳೆದ ರವಿವಾರ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತನ ಮೊಬೈಲ್‌ನಲ್ಲೂ ಬಾಲಕಿಯ ಜೊತೆಗಿನ ಫೋಟೋಗಳು ಲಭ್ಯವಾಗಿದೆ.
ವಿದ್ಯಾಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
























