ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ

ಬಳ್ಳಾರಿ: ಕಸಾಯಿಖಾನೆಗೆ ತೆಗೆದುಕೊಂಡು ಹೋಗುವುದಕ್ಕಾಗಿ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳನ್ನು ಹಳೇ ಬೈಪಾಸ್ ಬಳಿಯ ಗೋಲಬಡಿ ‌ದಾರಿಯಲ್ಲಿ ರಕ್ಷಣೆ ಮಾಡಲಾಗಿದೆ.

ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯನ್ನು ಆಧರಿಸಿ ಕೌಲಬಜಾರ್ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಾತಕ್ಕಾಗಿ ಇಷ್ಟೊಂದು ಗೋವುಗಳನ್ನು ಕೊಟ್ಟಿಗೆಯಲ್ಲಿ ಇರಿಸಲಾಗಿದೆ ಎನ್ನುವ ಪ್ರಶ್ನೆಗೆ ಸೂಕ್ತ ಉತ್ತರ ಸಿಕ್ಕಿಲ್ಲ ಎಂದು ವರದಿಯಾಗಿದೆ.

ಸದ್ಯ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿದ್ದ ಎಲ್ಲಾ ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು, ಅವುಗಳನ್ನು ಗೋಶಾಲೆೆಗೆ ರವಾನೆ ಮಾಡುವುದಾಗಿ ಪೊಲೀಸರು ಹೇಳಿದ್ದಾರೆ.





















































 
 

ಈ ಗೋವುಗಳನ್ನು ಬಕ್ರೀದ್ ಹಬ್ಬದ ಹಿನ್ನೆಲೆ ವಧಿಸಲು ಕೂಡಿ ಹಾಕಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

error: Content is protected !!
Scroll to Top