ಬೆಂಗಳೂರು: ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ಚಿತ್ರದಲ್ಲಿ ಬರುವ ದೈವದ ಪಾತ್ರಕ್ಕೆ ಅವಮಾನ ಮಾಡಿದ್ದು, ಆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚನೆ ಮಾಡಿದ್ದಾರೆ.
ಯಾರಿಗೂ ಮಾಹಿತಿ ಸಿಗದ ಹಾಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ, ಪೂಜೆ ಸಲ್ಲಿಸಿ, ಕ್ಷಮೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲೇ ರಣವೀರ್ ತಮ್ಮ ಎಕ್ಸ್ ಖಾತೆಯ ಮೂಲಕ ದೈವ ಭಕ್ತರಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಕೇಳುವುದಾಗಿಯೂ ತಿಳಿಸಿದ್ದರು.
























