ಚಿಪ್ಸ್‌, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ!

ಬೇಕರಿ ತಿನಿಸುಗಳಲ್ಲಿ ವ್ಯಾಪಕವಾಗಿ ರಾಸಾಯನಿಕ ಬಳಸುತ್ತಿರುವುದು ಪತ್ತೆ

ಬೆಂಗಳೂರು : ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಕರ್ಷಣೆಗಾಗಿ ಸಿಹಿತಿಂಡಿಗಳು, ಪಫ್ಸ್‌, ಚಿಪ್ಸ್‌ಮುಂತಾದ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್‌ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಇಲಾಖೆಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯದ ಮೂಲೆ ಮೂಲೆಗಳ ಬೇಕರಿಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು. ಪ್ರಸ್ತುತ ಬಂದಿರುವ ಲ್ಯಾಬ್ ವರದಿಯ ಪ್ರಕಾರ ಬಹುತೇಕ ಬೇಕರಿ ತಿನಿಸುಗಳು ಮತ್ತು ಚಿಪ್ಸ್‌ಗಳಲ್ಲಿ ನಿಷೇಧಿತ ಹಾಗೂ ಮಿತಿಮೀರಿದ ರಾಸಾಯನಿಕ ಬಣ್ಣಗಳನ್ನು ಮಿಶ್ರಣ ಮಾಡಲಾಗುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲ ವರ್ಗದ ಜನರಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳಲು ಇಂತಹ ಕಲಬೆರಕೆ ಹಾಗೂ ವಿಷಕಾರಿ ಆಹಾರ ಪದ್ಧತಿಯೂ ಮುಖ್ಯ ಕಾರಣ ಎಂದು ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.





















































 
 

ಆಹಾರ ಇಲಾಖೆಯ ಈ ಆಘಾತಕಾರಿ ವರದಿ ಪ್ರಕಟವಾಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ನಿಯಮ ಉಲ್ಲಂಘಿಸಿ ವಿಷಕಾರಿ ರಾಸಾಯನಿಕಗಳನ್ನು ಬಳಸುತ್ತಿರುವ ಇಂತಹ ಬೇಜವಾಬ್ದಾರಿ ತಯಾರಕರ ಮತ್ತು ಬೇಕರಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಂತಹ ಅಂಗಡಿಗಳನ್ನು ತಕ್ಷಣವೇ ಮುಚ್ಚಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

error: Content is protected !!
Scroll to Top