SDRF ಸಿಪಿಐ ಶ್ರೀಶೈಲ ಚೌಗಲೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ಎಸ್‌ಡಿಆರ್‌ಎಫ್ ಸಿಪಿಐ ಶ್ರೀಶೈಲ ಚೌಗಲೆ(37) ಅವರು ನೇಣು ಬಿಗಿದುಕೊಂಡು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಮ್ಮ ನಗರದಲ್ಲಿ ನಡೆದಿದೆ.

ಮನೆಯ ಕೊಠಡಿಯನ್ನು ಲಾಕ್ ಮಾಡಿಕೊಂಡು ಅವರು ನೇಣಿಗೆ ಶರಣಾಗಿರುವುದಾಗಿದೆ. ಅವರ ಪತ್ನಿಗೆ ಅನುಮಾನ ಬಂದು ತಕ್ಷಣವೇ ಎಸ್‌ಡ್ಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಬಂದು ಬಾಗಿಲು ಒಡೆದು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.





















































ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿದ್ದಾರೆ ಎನ್ನುವ ಸಂಗತಿ ಇನ್ನಷ್ಟೇ ತಿಳಿಯಬೇಕಿದೆ. ಉದ್ಯಮಬಾಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 
 

error: Content is protected !!
Scroll to Top