ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಪಟ್ಟವೇರಲು ಸಿದ್ಧತೆ
ಬೆಂಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ, ಡಿಸಿಎಂ ಡಿ.ಕೆ ಶಿವಕುಮಾರ್ ಪಾಳಯದಲ್ಲಿ ಚಟುವಟಿಕೆ ಗರಿಗೆದರಿದ್ದು, ಬಹುತೇಕ ಸೋಮವಾರ ಅವರಿಗೆ ಪಟ್ಟಾಭಿಷೇಕಬಾಗಲಿದೆ ಎಂದು ಮೂಲವೊಂದು ತಿಳಿಸಿದೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಿದ್ದಂತೆ, ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಶುಕ್ರವಾರ ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯಪಾಲರು ಕಾರ್ಯದ ಒತ್ತಡದಲ್ಲಿರುತ್ತಾರೆ. ಶುಕ್ರವಾರ ಸಂಜೆಯೊಳಗೆ ರಾಜೀನಾಮೆ ಅಂಗೀಕಾರವಾಗಬೇಕಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ಗೋದೂಳಿ ಮುಹೂರ್ತದಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮೇಲೆ ಅಥವಾ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ. ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸಿ ಪದಗ್ರಹಣ ನಡೆಸಲು ಸಿದ್ಧತೆ ನಡೆಸಲಾಗಿದೆ.
























