ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಅಧಿಕಾರ ಹಂಚಿಕೆ ಸೂತ್ರದನ್ವಯ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಗುರುವಾರ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ಇರಲಿಲ್ಲ. ಹೀಗಾಗಿ ಅವರ ಕಾರ್ಯದರ್ಶಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ನೀಡಿದ್ದರು.





















































 
 

ಬುಧವಾರ ರಾತ್ರಿಯೇ ರಾಜ್ಯಪಾಲರು ತುರ್ತಾಗಿ ಇಂದೋರ್‌ಗೆ ಹೋದ ವಿಚಾರ ರಾಜಕೀಯದಲ್ಲಿ ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿತ್ತು. ರಾಜೀನಾಮೆ ನೀಡಲು ಮರುದಿನ ಸಿದ್ದರಾಮಯ್ಯ ಬರುತ್ತಿದ್ದಾರೆ ಎಂಬ ಮಾಹಿತಿಯಿದ್ದೂ ರಾಜ್ಯಪಾಲರು ಇಂದೋರ್‌ಗೆ ಹೋದ ವಿಚಾರಕ್ಕೆ ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜೀನಾಮೆ ಅಂಗೀಕರಿಸುತ್ತಾರೋ ಇಲ್ಲವೋ ಎನ್ನುವ ಅನುಮಾನಗಳಿದ್ದವು.

error: Content is protected !!
Scroll to Top