ನಿಷೇದಿತ ಡ್ರಗ್ಸ್‌ ಸಾಗಾಟ: ಆರೋಪಿಗಳ ಬಂಧನ

ಬೆಳ್ತಂಗಡಿ: ನಿಷೇಧಿತ ಡ್ರಗ್ಸ್ MDMA ಯನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ವೇಣೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಆರೋಪಿಗಳನ್ನು ಮಿಜಾರಿನ ಮಹಮ್ಮದ್ ತಹ್ನವೀರ್ ಮತ್ತು ಮೂಡುಬಿದ್ರೆಯ ಮಹಮ್ಮದ್ ಸಫ್ವಾನ್ ಎಂದು ಗುರುತಿಸಲಾಗಿದೆ.

ವೇಣೂರು ಪೊಲೀಸ್ ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯನ್ನು ಆಧರಿಸಿ ಮೂಡುಬಿದಿರೆ ಮತ್ತು ಗುರುವಾಯನಕೆರೆಯ ಕಂಬಳದಡ್ಡ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಕಾರೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಪ್ರಕರಣ ಪತ್ತೆಯಾಗಿದೆ.





















































 
 

ಆರೋಪಿಗಳಿಂದ ಅಂದಾಜು ₹39,200 ಮೌಲ್ಯದ ಸುಮಾರು 3.92 ಗ್ರಾಂ ತೂಕದ MDMA ಮಾದಕವಸ್ತು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ಕಾರನ್ನೂ ಜಪ್ತಿ ಮಾಡಿದ್ದಾರೆ.ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top