ಮಂಗಳೂರು: ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ದಕ್ಷಿಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಅಜಿಲಮೊಗರುವಿನ ಮಾವಿನಕಟ್ಟೆ ನಿವಾಸಿ ಮಹಮ್ಮದ್ ಅಶ್ರಫ್ ಯಾನೆ ಅಜ್ಜು ಯಾನೆ ಸಮೀರ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಔಪಚಾರಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿ ಅಶ್ರಫ್ ವಿರುದ್ಧ ಸುರತ್ಕಲ್, ಬಂಟ್ವಾಳ, ಪಾಂಡೇಶ್ವರ, ಪುತ್ತೂರು, ಉಪ್ಪಿನಂಗಡಿ ಸೇರಿದಂತೆ ಹಲವು ಠಾಣೆಗಳಲ್ಲಿ ದರೋಡೆ, ಕಳ್ಳತನ ಸೇರಿದಂತೆ ಹಲವಾರು ಪ್ರಕರಣ ದಾಖಲಾಗಿದೆ.
























