ಜಮೀನಿಗಾಗಿ ನಡೆದ ರಕ್ತದೋಕುಳಿ : ಆರು ಜನರ ಬರ್ಬರ ಹತ್ಯೆ

ಹೊಲದಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಗುಂಡಿಕ್ಕಿ ಸಾಯಿಸಿದ ದುಷ್ಕರ್ಮಿಗಳು

ವಿಜಯಪುರ : ಆಸ್ತಿ ವಿವಾದ ಹಿನ್ನೆಲೆ 6 ಜನರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಜಮೀನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ ನಿರಾಳೆ ಕುಟುಂಬದ ಮಧ್ಯೆ ಜಗಳವಿತ್ತು. ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ಈ ಸಂಬಂಧ ನ್ಯಾಯ ಪಂಚಾಯತಿ ಕೂಡ ಆಗಿತ್ತು. 15-20 ಜನರನ್ನು ಒಳಗೊಂಡ ದುರ್ಷರ್ಮಿಗಳ ಗುಂಪು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದ್ದು, ಅಟ್ಟಾಡಿಸಿ 6 ಮಂದಿಯನ್ನು ಕೊಲೆ ಮಾಡಿದೆ.





















































 
 

ನಿರಾಳೆ ಕುಟುಂಬದವರು ಗೋವಿಂದಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 24 ಎಕರೆ ವಿವಾದಿತ ಜಮೀನನ್ನು ಆರು ತಿಂಗಳ ಹಿಂದೆ ಖರೀದಿ ಮಾಡಿದ್ದರು. ಈ ಸಂದರ್ಭದಲ್ಲಿ ವಿವಾದಿತ ಜಮೀನು ಖರೀದಿಸದಂತೆ ಊರಿನ ಅಪ್ಪುಗೌಡ ಪಾಟೀಲ್ ಹಾಗೂ ಕೊಲೆ ಮಾಡಿದ ಆರೋಪಿಗಳು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಆದರೂ ಅದನ್ನು ನಿರ್ಲಕ್ಷಿಸಿ ನಿರಾಳೆ ಕುಟುಂಬದವರು ಜಮೀನು ಖರೀದಿ ಮಾಡಿದ್ದರು.

ಟ್ರ್ಯಾಕ್ಟರ್, ಜೆಸಿಬಿ ಮೂಲಕ ಹೊಲವನ್ನು ಸ್ವಚ್ಛಗೊಳಿಸಿ ಕೃಷಿಗೆ ಸಜ್ಜುಗೊಳಿಸುತ್ತಿದ್ದ ವೇಳೆ ಕುಟುಂಬಸ್ಥರ ಮೇಲೆ ಆರೋಪಿಗಳು ದಾಳಿ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಭೀಮಾತೀರದಲ್ಲಿ ಹತ್ಯಾಕಾಂಡ ಪ್ರಕರಣ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವಿಂದಪುರದ ಜಮೀನಿಗೆ ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ್ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

error: Content is protected !!
Scroll to Top