ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ
ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್, ಪಾನ್ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದ್ದು, ದಾಳಿಯ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆ ವ್ಯಕ್ತವಾಗಿದೆ. ಜೈಲಿನಲ್ಲಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ನಿರ್ಧರಿಸಿರುವ ಪೊಲೀಸರು, ಮುಂದಿನ ದಿನಗಳಲ್ಲಿ ಮತ್ತೆ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದ್ದು, ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ ಬಳಿಕ ಮಾತನಾಡಿದ ಪೊಲೀಸ್ ಆಯುಕ್ತ ಕುಲದೀಪ್ ಜೈನ್, ಅಕ್ರಮ ಚಟುವಟಿಕೆ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಜೈಲಿನಲ್ಲಿ ಪರಿಶೀಲನೆ ನಡೆಸಿದ್ದೇವೆ. ಆದರೆ ತಪಾಸಣೆ ವೇಳೆ ಬೀಡಿ, ಸಿಗರೇಟ್, ತಂಬಾಕು ಬಿಟ್ಟು ಬೇರೇನು ಸಿಕ್ಕಿಲ್ಲ. ಮುಂದಿನ ದಿನಗಳಲ್ಲೂ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದರು.
ಅಧಿಕಾರಿಗಳು ಜೈಲಿಗೆ ಎಂಟ್ರಿಯಾಗುವ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸುತ್ತಿದ್ದಾರೆ .ವಿಚಾರಾಧೀನ ಕೈದಿಗಳನ್ನು ಭೇಟಿ ಮಾಡಲು ಬರುವ ಸಂದರ್ಭದಲ್ಲಿ ಕೆಲವರು ಬೀಡಿ ಸಿಗರೇಟ್ ಕೊಡುತ್ತಾರೆ. ಆದರೆ ತಿಳಿದುಬಂದ ಅಕ್ರಮ ಚಟುವಟಿಕೆ ಮಾಹಿತಿ ಸಂಬಂಧ ಯಾವುದೇ ಪೂರಕ ಸಾಕ್ಷ್ಯಗಳು ಸಿಕ್ಕಿಲ್ಲ. ಕಾಲ ಕಾಲಕ್ಕೆ ತಪಾಸಣೆ ನಡೆಸುತ್ತಿದ್ದರೆ ಅಕ್ರಮಕ್ಕೆ ಕಡಿವಾಣ ಬೀಳುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿಯೂ ತಪಾಸಣೆ ಮುಂದುವರಿಸುತ್ತೇವೆ ಎಂದರು.