ಬೆಂಗಳೂರು : ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಅನರ್ಹತೆಯು ಕಾಂಗ್ರೆಸ್‌ನ ರಾಜಕೀಯ ಲಾಭಕ್ಕೆ ಸಹಾಯ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮೊಯ್ಲಿ, ಖಂಡಿತವಾಗಿ, ಇದು ಪ್ರಚಾರದ ವಿಷಯವಾಗಿದೆ. ಮತ್ತು ಇದು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ ಹಾಗೂ ಸೇಡಿನ ರಾಜಕೀಯದ ಉತ್ತುಂಗವನ್ನು ತೋರಿಸುತ್ತದೆ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೋಮವಾರ ಹೇಳಿದರು.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಇದೆ ಮತ್ತು ಭ್ರಷ್ಟಾಚಾರ ವಿಷಯಗಳ ಬಗ್ಗೆ ಪಕ್ಷದ ಪ್ರಚಾರವು ಕೆಲಸ ಮಾಡಿದೆ, ಆದರೆ ಬಿಜೆಪಿ ಪ್ರಬಲ, ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಖಂಡಿತವಾಗಿಯೂ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ನಂತರ, ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿರುವುದು ನಮಗೆ ಪ್ರಚಾರದ ವಿಷಯವಾಗಿದೆ. ಬಿಜೆಪಿ ಪತನಕ್ಕೆ ಕಾರಣವಾಗುವ ಅಂಶಗಳಲ್ಲಿ ಒಂದಾಗಿರುವ ಈ ವಿಷಯವು ಕಾಂಗ್ರೆಸ್ ಪರ ಭಾಗಶಃ ಅನುಕಂಪದ ಅಲೆಯನ್ನು ಸೃಷ್ಟಿಸುತ್ತದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.
ತಮ್ಮ ಪಕ್ಷದ ಪ್ರಚಾರವು ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಆಕ್ರಮಣಕಾರಿಯಾಗಿದೆ. ಬಿಜೆಪಿ ಮತ್ತು ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸೇಡಿನ ರಾಜಕೀಯವನ್ನು ತೋರಿಸುವ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರಕಾರ ಗೊಂದಲ ಮೂಡಿಸಿದೆ ಎಂದು ಆರೋಪಿಸಿದರು.