ಉಪ್ಪಿನಂಗಡಿ : ಪ್ರತಿಷ್ಠಿತ ರಾಜಕಾರಣಿಯೊಬ್ಬರ ಫೋಟೊವನ್ನು ಮಹಿಳೆಯೊಂದಿಗೆ ಅಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಈ ಕುರಿತು ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನೆಕ್ಕಿಲಾಡಿಯ ಮಹಿಳೆಯೋರ್ವರು ದೂರು ನೀಡಿದ್ದಾರೆ. ದೂರಿನಲ್ಲಿ – ತನ್ನ ಫೋಟೊವನ್ನು ವಿಭಿನ್ನ ರೀತಿಯಲ್ಲಿ ಅಸಹ್ಯಕರವಾಗಿ, ಅಶ್ಲೀಲವಾಗಿ ಪ್ರತಿಷ್ಠಿತ ರಾಜಾಕರಣಿ ಜತೆಗೆ ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ರೀತಿ ಮಾಡಿ ತನ್ನ ಘನತೆಗೆ ಕುಂದುಂಟು ಮಾಡಿರುವ ಅಪರಿಚಿತ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಠಾಣೆಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಫೋಟೊವನ್ನು ನಕಲು ಮಾಡಲಾಗಿದೆಯೇ ಎಂಬುದನ್ನು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.