ಬೆಂಗಳೂರು : 2 ದಿನಗಳ ಕಾಲ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಏ. 7 ರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಬಾ ಚುನಾವಣೆಗೆ ಈಗಾಗಲೇ, ಕಾಂಗ್ರೆಸ್ ಒಟ್ಟು 224 ಸ್ಥಾನಗಳ ಪೈಕಿ 166 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ರಾಜ್ಯ ಬಿಜೆಪಿಯು ಒಟ್ಟು 224 ಸ್ಥಾನಗಳ ಪೈಕಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.