ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ತುರ್ತು ದ್ವಾರ ತೆರೆಯಲು ಯತ್ನಿಸಿದ ಕುಡುಕ ಪ್ರಯಾಣಿಕ

ದೆಹಲಿ : ದಿಲ್ಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೋರ್ವತುರ್ತು ಬಾಗಿಲು ತೆರೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಸಂಬಂಧಪಟ್ಟ ಸಂಸ್ಥೆಗಳಿಗೆ ದೂರು ನೀಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ದಿಲ್ಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ 6E 308 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಮಲೇರಿದ ಸ್ಥಿತಿಯಲ್ಲಿ ತುರ್ತು ನಿರ್ಗಮನದ ದ್ವಾರ ತೆರೆಯಲು ಪ್ರಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಎಚ್ಚರಿಕೆ ನೀಡಿ ಅವನನ್ನು ತಡೆದಿದ್ದಾರೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ನಂತರ ಪ್ರಯಾಣಿಕನನ್ನು ಸಿಐಎಸ್ಎಫ್‌ಗೆ ಹಸ್ತಾಂತರಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಮಾರ್ಚ್ ಅಂತ್ಯದಲ್ಲಿ, ದುಬೈ ಮುಂಬೈಗೆ ಇಂಡಿಗೊ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಸಿಬ್ಬಂದಿ ಎಚ್ಚರಿಕೆಗಳ ಹೊರತಾಗಿಯೂ ಮದ್ಯಪಾನ ಮಾಡಿ, ವಿಮಾನ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರನ್ನು ಅವಾಚ್ಯವಾಗಿ ನಿಂದಿಸಿರುವುದನ್ನು ನೆನಪಿಸಿಕೊಳ್ಳಬಹುದು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top