ಪುತ್ತೂರು: ಶ್ರೀ ಮಹಾಲಿಂಗೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಬೊಳುವಾರಿನಿಂದ ಸಾಗಿಬಂದ ಮೆರವಣಿಗೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.
ಬೊಳುವಾರು ಶ್ರೀ ಶಕ್ತಿ ಆಂಜನೇಯ ದೇವಸ್ಥಾನದ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಹೊರೆಕಾಣಿಕೆ ಮೆರವಣಿಗೆಯಲ್ಲಿ ಚೆಂಡೆ ವಾದ್ಯದೊಂದಿಗೆ ಕಲಶ ಹಿಡಿದ ಮಹಿಳೆಯರು, ಕುಣಿತ ಭಜನೆ ಸಾಗಿಬಂದಿತು.
ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಸಭೆ ಸದಸ್ಯ ಪಿ.ಜಿ. ಜಗನ್ನೀವಾಸ್ ರಾವ್, ಪ್ರಮುಖರಾದ ಸಾಜಾ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ಜಯರಾಮ್ ಕಬಕ ಮೊದಲಾದವರು ಉಪಸ್ಥಿತರಿದ್ದರು.
























