ನೀತಿಸಂಹಿತೆ ಜಾರಿಯಾದ 10 ದಿನದಲ್ಲಿ 100 ಕೋ. ರೂ. ನಗದು, ವಸ್ತುಗಳು ವಶ

ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕಣ್ಗಾವಲು

ಬೆಂಗಳೂರು : ಚುನಾವಣಾ ನೀತಿಸಂಹಿತೆ ಜಾರಿಯಾದ ಹತ್ತು ದಿನಗಳಲ್ಲಿ ಪೊಲೀಸರು 99.18 ಕೋಟಿ ರೂ. ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿರಿಸಿದೆ. ನಗದು ವಹಿವಾಟುಗಳ ಮೇಲೆ ನಿಗಾ ಇರಿಸಿದ್ದು ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಲಾಗಿದೆ. ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಆಯೋಗ ಜಪ್ತಿ ಮಾಡಿಕೊಂಡಿದೆ.

ಮಾ.29ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ ಹತ್ತು ದಿನಗಳಲ್ಲಿ ಒಟ್ಟು 99.18 ಕೋಟಿಯಷ್ಟು ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. 36.8 ಕೋಟಿ ರೂ. ಹಣ, 15.46 ಕೋಟಿ ರೂ. ಬೆಲೆಯ ಉಚಿತ ವಸ್ತುಗಳು, 30 ಕೋಟಿ ರೂ. ಬೆಲೆಯ 5.2 ಲಕ್ಷ ಲೀಟರ್​ ಮದ್ಯ, 15 ಕೋಟಿ ರೂ. ಬೆಲೆಯ ಬಂಗಾರ ಮತ್ತು 2.5 ಕೋಟಿ ರೂ. ಬೆಲೆಯ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ.
ಭಾನುವಾರ ಯಾದಗಿರಿ ಜಿಲ್ಲೆಯಲ್ಲಿ 34 ಲಕ್ಷ ರೂ. ಹಣ, 21 ಲಕ್ಷ ರೂ. ಮೌಲ್ಯದ 56 ಟಿವಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕ್ಷೇತ್ರದಲ್ಲಿ ಸ್ಟಾಟಿಕ್ ಸರ್ವೆಲೆನ್ಸ್ ತಂಡ ವಶಪಡಿಸಿಕೊಂಡಿದೆ. ಹೀಗೆ ಅಬಕಾರಿ ಇಲಾಖೆಯ ಅಧಿಕಾರಿಗಳು 1.62 ಕೋಟಿ ರೂ ಮೌಲ್ಯದ 54,282 ಲೀಟರ್​​ನಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ಆಯೋಗವು ಪಾರದರ್ಶಕತೆಗೆ ಒತ್ತು ನೀಡುತ್ತಿದ್ದು, ಸೂಕ್ತ ದಾಖಲೆಗಳಿಲ್ಲದ ನಗದು ಮತ್ತು ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಹಂಚಲು ರವಾನಿಸಲಾಗುತ್ತಿದ್ದ ವಸ್ತುಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top