ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ. 9ರಂದು ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಉದ್ಘಾಟನೆಗೊಂಡಿತು.
ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ಪಿ. ನಾರಾಯಣ ಭಟ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಎನ್.ಎಸ್.ಎಸ್. ಶಿಬಿರಗಳು ಸಮಾಜ ಹಾಗೂ ವಿದ್ಯಾರ್ಥಿಗಳನ್ನು ಬೆಸೆಯುವ ಕೊಂಡಿಗಳು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪರಿಪಾಲನೆ ಹಾಗೂ ಜವಾಬ್ದಾರಿಗಳನ್ನು ಬೆಳೆಸುವಲ್ಲಿ ಎನ್.ಎಸ್.ಎಸ್. ಶಿಬಿರ ಸಹಕಾರಿ. ನದಿಗಳು ಸಮುದ್ರವನ್ನು ಹೋಗಿ ಸೇರುವಂತೆ, ವಿದ್ಯಾರ್ಥಿಗಳು ಸಮಾಜದೊಂದಿಗೆ ಬೆರೆತು ಒಂದಾಗಬೇಕು ಎಂದರು.
ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ವೇಣುಗೋಪಾಲಭಟ್ ಪಟ್ಟೆ, ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಪಟ್ಟೆ ಪ್ರತಿಭಾ ಪ್ರೌಢಶಾಲೆ ಮುಖ್ಯಗುರು ಸುಮನಾ ಬಿ., ಶ್ರೀ ಕೃಷ್ಣ ಪ್ರಾಥಮಿಕ ಶಾಲೆಯ ಶಾಲಾಭಿವೃದ‍್ಧಿ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ ಮಾತನಾಡಿ ಶಿಬಿರಕ್ಕೆ ಶುಭಹಾರೈಸಿದರು.
ಶಿಬಿರಾಧಿಕಾರಿ ಪುಷ್ಪಾ ಎನ್. ಉಪಸ್ಥಿತರಿದ್ದರು.ಸಂತ ಫಿಲೋಮಿನಾ ಕಾಲೇಜಿನ ಶಿಕ್ಷಕರು ಮತ್ತು ಆಡಳಿತ ಸಿಬ್ಬಂದಿ, ಪಟ್ಟೆ ಶ್ರೀ ಕೃಷ್ಣ ಯುವಕ ಮಂಡಲದ ಅಧ್ಯಕ್ಷರು ಮತ್ತು ಸದಸ್ಯರು, ಪಟ್ಟೆ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಸದಸ್ಯರು, ಪಟ್ಟೆ ವಾಲಿ ಫ್ರೆಂಡ್ಸ್ ಕ್ಲಬ್ ಸದಸ್ಯರು ಹಾಗೂ ಶಿಬಿರಾರ್ಥಿಗಳು ಈ ಕಾರ್ಯಕ್ರದಲ್ಲಿ ಭಾಗವಹಿಸಿದರು.
ಸಹಶಿಬಿರಾಧಿಕಾರಿ ಧನ್ಯ ಪಿ.ಟಿ., ಚೈತ್ರ ಎನ್.ಪಿ. ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಶಿಬಿರಾರ್ಥಿಗಳಾದ ಚೈತ್ರ ಮತ್ತು ಬಳಗ ಪ್ರಾರ್ಥಿಸಿದರು. ಶಿಬಿರಾಧಿಕಾರಿ ವಾಸುದೇವ ಎನ್. ಸ್ವಾಗತಿಸಿದರು. ಶಿಬಿರಾರ್ಥಿ ರಾಶಿ ರೈ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕರ ದಿನಕ ಕಾರ್ಯಕ್ರಮ ನಿರೂಪಿಸಿದರು.
ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ:
ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ “ಯುವಶಕ್ತಿರಾಷ್ಟ್ರಶಕ್ತಿ” ಎಂಬ ಘೋಷಣೆಯೊಂದಿಗೆ ಶಿಬಿರವು ಏ. 9ರಿಂದ 15ರವರೆಗೆ ನಡೆಯಲಿದೆ. ಈ ಶಿಬಿರದಲ್ಲಿ ಪ್ರತಿದಿನ ಶ್ರಮದಾನ, ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ಶಿಬಿರಾರ್ಥಿಗಳು ಮತ್ತು ಸ್ಥಳೀಯರ ಪಾಲ್ಗೊಳ್ಳುವಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿವೆ.