ಹಿಂದೂ ಫೈರ್ ಬ್ರಾಂಡ್ ಪುತ್ತಿಲ ಪಕ್ಷೇತರ ಅಭ್ಯರ್ಥಿ | ಏ. 17ರಂದು ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ

ಪುತ್ತೂರು: ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಏ. 17ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಕಾರ್ಯಕರ್ತರ ಆಕಾಂಕ್ಷೆಯಂತೆ ಹಿಂದುತ್ವದ ಧ್ವನಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಘೋಷಿಸಿದರು.

ಏ. 17ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಬೆಳಿಗ್ಗೆ 10 ಗಂಟೆಯಿಂದ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯಲ್ಲಿ ತೆರಳಲಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top