ಸುಳ್ಯ: ಭಾಗೀರಥಿ ಮುರುಳ್ಯ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಏ. 18ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ತಮಿಳುನಾಡು ಬಿಜೆಪಿ ಅಧ್ಯಕ್ಷ, ಐಪಿಎಸ್ ಮಾಜಿ ಅಧಿಕಾರಿ ಅಣ್ಣಾಮಲೈ ಜೊತೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಭಾಗೀರಥಿ ಮುರುಳ್ಯ ಅವರು ಏ. 18ರಂದು ಬೆಳಿಗ್ಗೆ 10ರಿಂದ 12 ಗಂಟೆಯ ನಡುವಿನಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.