ಪುತ್ತೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಶನಿವಾರ ಪುತ್ತೂರಿಗೆ ಭೇಟಿ ನೀಡಿ, ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಬಿ.ಎಲ್. ಸಂತೋಷ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ಪುತ್ತೂರಿನ ಅಭ್ಯರ್ಥಿ ಆಶಾ ತಿಮ್ಮಪ್ಪ, ಸುಳ್ಯ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಮುಖಂಡರು, ಕಾರ್ಯಕರ್ತರೊಂದಿಗೆ ಮಾತನಾಡಿ, ಚುನಾವಣಾ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.