ಪುತ್ತೂರು: ಈ ಬಾರಿ ಪು್ತೂರು ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರಿಗೆ ಟಿಕೇಟ್ ನೀಡದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಉಪಾಧ್ಯಕ್ಷ ವಿಶಾಲಾಕ್ಷಿ ಬನ್ನೂರು ಹಾಗೂ ಶುಭ ಮಾಲಿನಿ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆದ ಶಾರದಾ ಅರಸ್, ಈ ಬಾರಿ ಶಕುಂತಲಾ ಟಿ. ಶೆಟ್ಟಿ ಅವರಿಗೆ ಪುತ್ತೂರು ಕ್ಷೇತ್ರದಿಂದ ಟಿಕೇಟ್ ನೀಡದಿದ್ದಲ್ಲಿ ಮಹಿಳಾ ಪದಾಧಿಕಾರಿಗಳು ಪಕ್ಷ ಹುದ್ದಗೆ ಸಾಮೂಹಿಕ ರಾಜೀನಾಮೆ ನೀಡುವುದಲ್ಲದೆ, ಪಕ್ಷದಲ್ಲಿ ತಟಸ್ಥವಾಗಿ ಉಳಿಯಲಿದ್ದೇವೆ ಎಂದು ಹೇಳಿಕೆ ನೀಡಿದ್ದರು.
ಶಕುಂತಳಾ ಶೆಟ್ಟಿಯವರು ಶಾಸಕರಾಗಿದ್ದ ಸಂದರ್ಭ ವಿಧಾನಸಭೆಯಲ್ಲಿ ಮಹಿಳಾ ಪರವಾಗಿ ಧ್ವನಿ ಎತ್ತುವುದರ ಜತೆಗೆ ಮಹಿಳೆಯರ ಪರವಾಗಿ ಹಲವಾರು ಕೆಲಸ ಕಾರ್ಯಗಳನ್ನು ಮಾಡಿದ್ದರು ಎಂದು ಸಂದರ್ಭದಲ್ಲಿ ತಿಳಿಸಿದ್ದರು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಪಕ್ಷದ ಟಿಕೇಟ್ ನೀಡಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದಂತೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.