ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ

ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.

ಇನ್ನು 123,64,49,480.47 ರೂ. ಆದಾಯ ಗಳಿಸಿದ್ದು ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನಪಡೆಯುವ ನಿರೀಕ್ಷೆ ಇದೆ. ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಬಂದ ಆದಾಯ ಸೇರಿಸಿ ದಾಖಲೆ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗಿದೆ. ಈ ಹಿಂದೆ 2006-07ನೇ ಸಾಲಿನಲ್ಲಿ ದೇವಸ್ಥಾನದ ಆದಾಯ 19,76 ಕೋಟಿ ರೂ. ಆಗಿತ್ತು. 2007- 08ರಲ್ಲಿ 24.44 ಕೋಟಿ ರೂ. ಗಳಿಗೆ ಏರಿತ್ತು. 2008-09ರಲ್ಲಿ 31 ಕೋಟಿ ರೂ., 2009-10ರಲ್ಲಿ 38.51 ಕೋಟಿ, 2011-12ರಲ್ಲಿ 56.24 ಕೋಟಿ, 2012-13ರಲ್ಲಿ 66.76 ಕೋಟಿ, 2013-14ರಲ್ಲಿ 68 ಕೋಟಿ, 2014-15ರಲ್ಲಿ 77 ಕೋಟಿ, 2015-16ರಲ್ಲಿ 88 ಕೋಟಿ, 2016-17ರಲ್ಲಿ 91.69 ಕೋಟಿ, 2017-18ರಲ್ಲಿ 95.92 ಕೋಟಿ, 2018-19ರಲ್ಲಿ 92,09 ಕೋಟಿ, 2019-20ರಲ್ಲಿ 98.92 ಕೋಟಿ, 2020-21ರಲ್ಲಿ 68.94 ಕೋಟಿ, 2021-22ರಲ್ಲಿ 12.73 ಕೋಟಿ ಆದಾಯ ಬಂದಿತ್ತು. ಕೊರೊನಾದಿಂದ ಭಕ್ತರಿಲ್ಲದೆ ಕಡಿಮೆಯಾಗಿದ್ದ ಆದಾಯ ಈಗ ಏಕಾಏಕಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದೆ. ಈ ಮೂಲಕ ಸತತ ರಾಜ್ಯದ ನಂಬರ್ ಒನ್ ಆದಾಯ ಗಳಿಕೆಯ ದೇವಸ್ಥಾನಗಳ ಪಟ್ಟಿಯಲ್ಲಿ ಕುಕ್ಕೆ ಹೆಸರು ಮಾಡಿದೆ.
ಸರ್ಪದೋಷ ಪರಿಹಾರಕ್ಕೆ ಹೆಚ್ಚು ಹೆಸರುವಾಸಿಯಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ದರ್ಶನ ಮಾಡುತ್ತಾರೆ. ಮಡೆ ಸ್ನಾನ, ಮಹಾ ರಥೋತ್ಸವ, ರಂಗಪೂಜೆ, ಪುರುಷರ್ಯ ಒಂಟಿನೇಮಾ, ಮತ್ತು ದೀಪೋತ್ಸವಗಳು ಈ ದೇವಾಲಯದ ಪ್ರಮುಖ ಉತ್ಸವಗಳಾಗಿವೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top