ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ದಿವ್ಯಾಪ್ರಭಾ ಚಿಲ್ತಡ್ಕ ಅವರು ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿದ್ದು, ಪುತ್ತೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೇಟ್ ಪಡೆದಿದ್ದರು.