ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ನೃತ್ಯಾಂತರಂಗ-97 ಏ.21 ಶುಕ್ರವಾರ ಸಂಜೆ 5.45 ಕ್ಕೆ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಪಾಲ್ಗೊಳ್ಳಲಿದ್ದಾರೆ.
ವಿದ್ವಾನ್ ದೀನಪ್ ಕುಮಾರ್, ವಿದುಷಿ ಪ್ರೀತಿಕಲಾ, ಅಪೂರ್ವಗೌರಿ ದೇವಸ್ಯ, ಶುಭಾ ಅಚಳ್ಳಿ, ವಿಂಧ್ಯಾ ಕಾರಂತ, ವಿಭಾಶ್ರೀ ಗೌಡ, ಪ್ರಣಮ್ಯ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.