ಪುತ್ತೂರು : ದ್ವಿತೀಯ ಪಿಯುಸಿಯಲ್ಲಿ ತಾಯಿ – ಮಗಳು ಜೊತೆಯಾಗಿ ಪರೀಕ್ಷ ಬರೆದು ಉತ್ತೀರ್ಣರಾದ ಅಪರೂಪದ ಸಂಗತಿ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಹಾಗೂ ಮಗಳು ತೃಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ.
ಸುಳ್ಯದಲ್ಲಿ ಗೃಹರಕ್ಷಕ ದಳದಲ್ಲಿ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆ ಬಿಡುವಿನ ವೇಳೆ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಉತ್ತೀರ್ಣರಾಗಿದ್ದಾರೆ. ಅವರಿಗೆ ಕಾಲೇಜಿನ ಉಪನ್ಯಾಸಕರು ಪುಸ್ತಕಗಳನ್ನು ನೀಡಿ ಸಹಕರಿಸಿದ್ದಾರೆ. ಮಗಳು ತೃಷಾ ಸುಳ್ಯದ ಜ್ಯೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಈ ಮೂಲಕ ತಾಯಿ-ಮಗಳು ಪರೀಕ್ಷೆಗೆ ಬರೆದು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದಾರೆ.