ಪುತ್ತೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರೇರಣಾ ತರಬೇತಿ ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದೆ.
ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.100 ಫಲಿತಾಂಶ ಪಡೆದಿದೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಾಝ್ (560), ಅಮನ್ ಅಡ್ಯಂತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್ (524), ಅನ್ಸಾಫ್ (517) ಹಾಗೂ ಅಬ್ದುಲ್ ಅಹದ್ (512) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.