ಪುತ್ತೂರು: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿ ಏಕಕಾಲದಲ್ಲಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಡಬಲ್ ಇಂಜಿನ್ ಸರಕಾರದ ಸಾಧನೆ ಕುರಿತು ಮನೆ ಮನೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಬೊಳುವಾರಿನಲ್ಲಿ ಡಾ.ಎಂ.ಕೆ.ಪ್ರಸಾದ್ ಅಭ್ಯರ್ಥಿ ಆಶಾ ತಿಮ್ಮಪ್ಪ ಪರಿಚಯ ಪತ್ರವನ್ನು ಮನೆ, ಅಂಗಡಿಗಳಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಇಂದು ಶೇಖರ, ನಗರಸಭೆ ಮಾಜಿ ಸದಸ್ಯರಾದ ಸುಜೀಂದ್ರ ಪ್ರಭು, ವನಿತಾ, ಮಾಜಿ ಪುರಸಭೆ ಅಧ್ಯಕ್ಷೆ ಪ್ರೇಮಲತಾ ರಾವ್, ಕಿರಣ್ ಶಂಕರ್ ಮಲ್ಯ, ಸಾವಿತ್ರಿ ಕೊಂಬೆಟ್ಟು, ನೀಲಂತ್ ಬೊಳುವಾರು, ಸದಾನಂದ, ಮಾಜಿ ಪುರಸಭಾ ಅಧ್ಯಕ್ಷ ಲೋಕೇಶ್ ಹೆಗ್ಡೆ, ದಯಾನಂದ, ಗಣೇಶ್ ಪೈ ಮತ್ತಿತರರು ಪಾಲ್ಗೊಂಡಿದ್ದರು.
























