ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವೇಶ್ವರ ಜಯಂತಿ

ಪುತ್ತೂರು: ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಶರಣ ಬಸವೇಶ್ವರ ಜಯಂತಿ ಆಚರಣೆ ಭಾನುವಾರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ದೀಪ ಬೆಳಗಿಸಿ ಉದ್ಘಾಟಿಸಿ, ಶರಣ ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದವರು. ಈ ನಿಟ್ಟಿನಲ್ಲಿ ಅವರ ಜಯಂತಿ ಆಚರಣೆ ಮಾಡುವುದು ಅರ್ಥಪೂರ್ಣ ಎಂದರು.

ವೇದಿಕೆಯಲ್ಲಿ  ತಹಶೀಲ್ದಾರ್ ಶಿವಶಂಕರೇ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಉಪತಹಶೀಲ್ದಾರ್ ಸುಲೋಚನಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top