ಕೊಂಚ ಸಮಯದ ಬಿಡುವಿನ ಬಳಿಕ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ನಡ ನಟಿ
ಬೆಂಗಳೂರು : ಕನ್ನಡ ನಟಿ, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದಾರೆ. ಇಂದು ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.
ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ರಮ್ಯಾ ಮುಂದಿನ ಕೆಲ ದಿನಗಳ ಕಾಲ ಮಂಡ್ಯದಲ್ಲಿ ಬಿರುಸಿನಿಂದ ಕೈ ಅಭ್ಯರ್ಥಿಗಳ ಪರವಾಗಿ ಪುಚಾರ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಎಲ್ಲ ಸ್ನಾನಗಳನ್ನು ಕಾಂಗ್ರೆಸ್ಸನ್ನು ಸೋಲಿಸಿ ಗೆದ್ದಿತ್ತು. ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಬಿಜೆಪಿಯೂ ತೀವ್ರ ಪೈಪೋಟಿ ನೀಡುವ ನಿರೀಕ್ಷೆಯಿದೆ.
ರಮ್ಯಾ ಕಾಂಗ್ರೆಸ್ನ ಸ್ಟಾರ್ ಪ್ರಚಾರಕಿ. ಅವರು ಎಲ್ಲಿ ಪ್ರಚಾರ ಮಾಡಬೇಕೆಂಬುದನ್ನು ಪಕ್ಷದ ಘಟಕ ನಿರ್ಧರಿಸಲಿದೆ. ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರು ಪುಮುಖ ಜಿಲ್ಲೆಗಳಲ್ಲಿ ಪ್ರಚಾರ ಮಾಡುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ರಮ್ಯಾ ಮಂಡ್ಯದಲ್ಲಿ ಪ್ರಚಾರ ನಡೆಸಿದರೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಒಳ್ಳೆಯದು ಎನ್ನುತ್ತಾರೆ.
ಮಂಡ್ಯ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದು ಅವರ ಪ್ರಭಾವ ಎಷ್ಟರ ಮಟ್ಟಿಗೆ ಮತಗಳಾಗಿ ಪರಿವರ್ತನೆಯಾಗಲು ಸಹಾಯವಾಗಲಿದೆ ಎಂದು ನೋಡಬೇಕಿದೆ.