ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.
ಮುಸ್ಲಿಮರಿಗೆ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17 ಉಪಜಾತಿಗಳಿವೆ. ಅವೆಲ್ಲವೂ ಹಿಂದುಳಿದ ವರ್ಗದಲ್ಲಿಯೇ ಇವೆ. ಇಲ್ಲಿಯೂ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ನಾವು ಈಗ ಮಾಡಿದ ಮೀಸಲಾತಿಯಲ್ಲಿಯೂ ಅದು ಸಿಗುತ್ತದೆ. ಇದರಲ್ಲಿ ಅನ್ಯಾಯದ ಮಾತೇ ಇಲ್ಲ. ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣಗೊಳ್ಳುವವರೆಗೆ ನಾವು ಅದನ್ನು ಮುಂದಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ನಾವು ನಿರ್ಧರಿಸಿದ್ದೇವೆ ಅಂತೆಯೇ ನ್ಯಾಯಾಲಯವು ಯಾವುದೇ ತಡೆಯಾಜ್ಞೆ ನೀಡಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top