ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ 2022-23ನೇ ಸಾಲಿನಲ್ಲಿ 400 ಕೋಟಿಗೂ ಅಧಿಕ ವ್ಯವಹಾರ ನಡೆಸಿ ಒಂದು ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ.
ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ 2002ರಲ್ಲಿ ಸಂಘ ಆರಂಭಗೊಂಡಿದ್ದು, ಮುಖ್ಯ ಕಚೇರಿ ಸಹಿತ ಒಟ್ಟು 8 ಶಾಖೆಗಳನ್ನು ಹೊಂದಿದೆ. ಪುತ್ತೂರು ಎಪಿಎಂಸಿ ಮಾನಾಯಿ ಆರ್ಚ್ ಕಟ್ಟಡ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಆಲಂಕಾರು, ಕುಂಬ್ರ ಹಾಗೂ ಕಾಣಿಯೂರುಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಸುಮಾರು 7 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ.
ಸಂಘ 3.5 ಕೋಟಿಗೂ ಅಧಿಕ ಪಾಲು ಬಂಡವಾಳ ಹೊಂದಿದೆ. ಸದ್ರಿ ಅವಧಿಯಲ್ಲಿ 76 ಕೋಟಿಗಿಂತ ಅಧಿಕ ಪಾಲು ಬಂಡವಾಳ ಹೊಂದಿದೆ. 72 ಕೋಟಿಗಿಂತ ಮಿಕ್ಕಿ ಹೊರಬಾಕಿ ಸಾಲವಿದ್ದು, ಪ್ರಥಮ ಬಾರಿಗೆ ಶೇ.99.61 ಸಾಲ ವಸೂಲಾತಿ ಮಾಡಲಾಗಿದೆ ಎಂದು ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು,.ಪಿ.ರಾಮಕೃಷ್ಣ, ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸುಧಾಕರ್ ತಿಳಿಸಿದ್ದಾರೆ.